ಚಿಕ್ಕಬಳ್ಳಾಪುರ: ತೆಲಂಗಾಣ ಸಾರಿಗೆ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, 10ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಟೋಲ್ ಗೇಟ್ ಬಳಿ ನಡೆದಿದೆ.
ಬಸ್ ಚಾಲಕ ಸೇರಿದಂತೆ 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಬಾಗೇಪಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ತೆಲಂಗಾಣದ ಸಾರಿಗೆ ಬಸ್ ಹೈದರಾಬಾದ್ ನಿಂದ ಬೆಂಗಳೂರಿಗೆ ಬರುತ್ತಿತ್ತು. ಈ ವೇಳೆ ಅಪಘಾತ ಸಂಭವಿಸಿದೆ.