
ಇಮ್ರಾನ್ ಖಾನ್ ಅವರ ಕಾರನ್ನು ಸುತ್ತುವರಿದಿರುವ ವಿಡಿಯೋಗಳು ಹರಿದಾಡ್ತಿವೆ. ಬಂಧನ ವೇಳೆ ಇಮ್ರಾನ್ ಪರ ವಕೀಲರಿಗೆ ಗಂಭೀರ ಗಾಯಗಳಾಗಿವೆ.
ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ಇತರೆ ಪ್ರಕರಣಗಳಲ್ಲಿ ಜಾಮೀನು ಪಡೆದುಕೊಳ್ಳುವ ಸಲುವಾಗಿ ಇಮ್ರಾನ್ ಖಾನ್ ಇಸ್ಲಾಮಾಬಾದ್ ಹೈಕೋರ್ಟ್‌ಗೆ ತೆರಳಿದ್ದರು. ಪ್ರಧಾನಿ ಹುದ್ದೆಯಿಂದ ಕೆಳಗಿಳಿದ ದಿನದಿಂದಲೂ ಅವರು ಸರ್ಕಾರವನ್ನು ಟೀಕಿಸುವ ಮೂಲಕ ಕೆಂಗಣ್ಣಿಗೆ ಗುರಿಯಾಗಿದ್ದರು.