ಇದೇ ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿಯವರು ನವದೆಹಲಿಯಲ್ಲಿ ನೂತನವಾಗಿ ನಿರ್ಮಿಸಿರುವ ಸಂಸತ್ ಭವನವನ್ನು ಉದ್ಘಾಟಿಸುತ್ತಿದ್ದು, ಇದನ್ನು ವಿರೋಧಿಸಿ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಲಾಗಿದೆ.
ವಕೀಲರಾದ ಜಯಾ ಸುಕಿನ್ ಎಂಬವರು ಈ ಅರ್ಜಿಯನ್ನು ಸಲ್ಲಿಸಿದ್ದು, ರಾಷ್ಟ್ರದ ಮೊದಲ ಪ್ರಜೆ ರಾಷ್ಟ್ರಪತಿಗಳು ಇದನ್ನು ಉದ್ಘಾಟಿಸಬೇಕು. ಹೀಗಾಗಿ ಈ ಕುರಿತಂತೆ ನಿರ್ದೇಶನ ನೀಡಲು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.
ಈಗ ಈ ಅರ್ಜಿಯನ್ನು ತಳ್ಳಿ ಹಾಕಿರುವ ಸುಪ್ರೀಂ ಕೋರ್ಟ್, ಈ ವಿಷಯದಲ್ಲಿ ತಾನು ಮಧ್ಯ ಪ್ರವೇಶಿಸಲು ಬಯಸುವುದಿಲ್ಲ ಎಂದು ಹೇಳಿದೆ. ಹೀಗಾಗಿ ಭಾನುವಾರ ನಡೆಯಲಿರುವ ನೂತನ ಸಂಸತ್ ಭವನದ ಉದ್ಘಾಟನೆ ನಿಗದಿಯಂತೆ ನೆರವೇರಲಿದೆ.