ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ತೆಲಂಗಾಣದ ಬಿಜೆಪಿ ಶಾಸಕ ರಾಜಸಿಂಗ್ ಈಗ ಬಂಧನಕ್ಕೊಳಗಾಗಿದ್ದಾರೆ.
ಇದೀಗ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಬಿಜೆಪಿ, ರಾಜಸಿಂಗ್ ಅವರನ್ನು ಸಸ್ಪೆಂಡ್ ಮಾಡಿದೆಯಲ್ಲದೆ, ಹತ್ತು ದಿನಗಳೊಳಗಾಗಿ ವಿವರಣೆ ನೀಡುವಂತೆ ಶೋಕಾಸ್ ನೋಟಿಸ್ ನೀಡಲಾಗಿದೆ.
ನೂಪೂರ್ ಶರ್ಮಾ ಬಳಿಕ ರಾಜಸಿಂಗ್ ಅವರು ನೀಡಿದ್ದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಅವರ ವಿರುದ್ಧ ದೂರು ದಾಖಲಾದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಬಂಧಿಸಿದ್ದರು.