alex Certify BREAKING NEWS: ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಏಕನಾಥ್ ಶಿಂಧೆ ಸ್ವಕ್ಷೇತ್ರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ 144 ಸೆಕ್ಷನ್ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಏಕನಾಥ್ ಶಿಂಧೆ ಸ್ವಕ್ಷೇತ್ರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ 144 ಸೆಕ್ಷನ್ ಜಾರಿ

ಮಹಾರಾಷ್ಟ್ರದ ರಾಜಕೀಯ ದಿನಕ್ಕೊಂದು ನಾಟಕೀಯ ಬೆಳವಣಿಗೆ ಪಡೆದುಕೊಳ್ಳುತ್ತಿದ್ದು, ಈವರೆಗೆ ತಮಗೆ ರಾಷ್ಟ್ರೀಯ ಪಕ್ಷವೊಂದರ ಬೆಂಬಲವಿದೆ ಎಂದು ಹೇಳಿಕೊಳ್ಳುತ್ತಿದ್ದ ಬಂಡಾಯ ಶಾಸಕರು ನೇತೃತ್ವ ವಹಿಸಿರುವ ಏಕನಾಥ್ ಶಿಂಧೆ, ಯುಟರ್ನ್ ಹೊಡೆದಿದ್ದು, ತಮಗೆ ಯಾವುದೇ ರಾಷ್ಟ್ರೀಯ ಪಕ್ಷದ ಬೆಂಬಲವಿಲ್ಲ ಎಂದು ಹೇಳಿಕೊಂಡಿದ್ದಾರೆ.

ಇದರ ಮಧ್ಯೆ ಬಂಡಾಯ ಶಮನ ಮಾಡುವ ನಿಟ್ಟಿನಲ್ಲಿ ಪ್ರತಿ ತಂತ್ರ ಹೆಣೆಯುತ್ತಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಏಕನಾಥ್ ಶಿಂಧೆ ಬಾಳ ಸಾಹೇಬ್ ಠಾಕ್ರೆ ಅವರ ಹೆಸರನ್ನು ಬಿಟ್ಟು ಚುನಾವಣೆಯಲ್ಲಿ ಸ್ಪರ್ಧಿಸಲಿ ಎಂದು ಸವಾಲು ಹಾಕಿದ್ದಾರೆ. ಅಲ್ಲದೆ ಶುಕ್ರವಾರದಂದು ಆದಿತ್ಯ ಠಾಕ್ರೆ ಶಿವಸೇನಾ ಜಿಲ್ಲಾ ಘಟಕಗಳ ಅಧ್ಯಕ್ಷರ ಸಭೆ ನಡೆಸಿದ್ದಾರೆ.

ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿದ್ದವರಿಗೆ ‘ಗುಡ್ ನ್ಯೂಸ್’

ಇದಾದ ಬಳಿಕ ಶಿವಸೇನೆ ವಿರುದ್ಧ ಬಂಡೆದ್ದು ಹೋಗಿರುವ ಶಾಸಕರ ನಿವಾಸದ ಮುಂದೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬಂಡಾಯ ಶಾಸಕರು ನೇತೃತ್ವ ವಹಿಸಿರುವ ಏಕನಾಥ್ ಶಿಂಧೆ ಪ್ರತಿನಿಧಿಸುವ ಥಾಣೆ ವಿಧಾನಸಭಾ ಕ್ಷೇತ್ರದಲ್ಲೂ ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಥಾಣೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...