ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆ ತಾರಕಕ್ಕೇರಿರುವ ಬೆನ್ನಲ್ಲೇ ಬಂಡಾಯ ಶಮನಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.
ಮೂರು ದಿನಗಳ ಭೇಟಿ ಹಿನ್ನೆಲೆಯಲ್ಲಿ ದೆಹಲಿಯಿಂದ ಬೆಂಗಳೂರಿನ ಕೆಐಎ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅರುಣ್ ಸಿಂಗ್ ಅವರಿಗೆ ರಾಜ್ಯ ಬಿಜೆಪಿ ನಾಯಕರು ಭರ್ಜರಿ ಸ್ವಾಗತ ಕೋರಿದ್ದಾರೆ. ಅರುಣ್ ಸಿಂಗ್ ಆಗಮಿಸುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಚಟುವಟಿಕೆ ಬಿರುಸುಕೊಂಡಿದ್ದು, ಸಚಿವರು, ಶಾಸಕರು ಸಭೆಯಲ್ಲಿ ನಿರತರಾಗಿದ್ದಾರೆ.
ಪ್ರತಿ ದಿನ 150 ರೂ. ಹೂಡಿಕೆ ಮಾಡಿ ಮಕ್ಕಳ ಭವಿಷ್ಯ ಗಟ್ಟಿಗೊಳಿಸಿ
ಒಂದೆಡೆ ಸಿಎಂ ಯಡಿಯೂರಪ್ಪ ವಿರೋಧಿ ಬಣ ಗೌಪ್ಯ ಸಭೆ ನಡೆಸಿದ್ದರೆ ಇನ್ನೊಂದೆಡೆ ಸಿಎಂ ಪರವಾದ ಬಣ ಪ್ರತ್ಯೇಕ ಸಭೆ ನಡೆಸಿದೆ. ಒಟ್ಟಾರೆ ಅರುಣ್ ಸಿಂಗ್ ಆಗಮನದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದೆ.