
ಬೆಂಗಳೂರು: ಇತ್ತೀಚೆಗಷ್ಟೇ ಯುವತಿಯ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ಮಾಸುವ ಮುನ್ನವೇ ರಾಜಧಾನಿ ಬೆಂಗಳೂರಿನಲ್ಲಿ ಇಂತದ್ದೇ ಮತ್ತೊಂದು ಘಟನೆ ನಡೆದಿದ್ದು, ಮಹಿಳೆಯ ಮೇಲೆ ವ್ಯಕ್ತಿಯೋರ್ವ ಆಸಿಡ್ ದಾಳಿ ನಡೆಸಿದ್ದಾನೆ.
ಬೆಂಗಳೂರಿನ ಸಾರಕ್ಕಿ ಬಳಿ ಪರಿಚಯಸ್ಥನೇ ಮಹಿಳೆಯ ಮೇಲೆ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.