ಮಹತ್ವದ ಬೆಳವಣಿಗೆಯಲ್ಲಿ ಯುಕೆ ಪ್ರಧಾನಿ ಲಿಜ್ ಟ್ರಸ್ ರಾಜೀನಾಮೆ ನೀಡಿದ್ದಾರೆ. ಹದಗೆಟ್ಟ ಆರ್ಥಿಕ ಪರಿಸ್ಥಿತಿಯನ್ನು ಹಳಿಗೆ ತರುವ ಬದಲು ಮತ್ತಷ್ಟು ಪಾತಳಕ್ಕೆ ತಳ್ಳಿದ ಆರೋಪದ ಹಿನ್ನೆಲೆಯಲ್ಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಹಿಂದೆ ಅಧ್ಯಕ್ಷ ಬೋರಿಸ್ ಜಾನ್ಸನ್ ಕೂಡ ಇದೇ ಆರೋಪದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದು, ಬಳಿಕ ನಡೆದ ಚುನಾವಣೆಯಲ್ಲಿ ಲಿಜ್ ಟ್ರಸ್ ಆಯ್ಕೆಯಾಗಿದ್ದರು.
ಅವರು ತಮ್ಮ ಪ್ರತಿಸ್ಪರ್ಧಿ ಭಾರತೀಯ ಮೂಲದ ರಿಷಿ ಸುನಾಕ್ ಅವರನ್ನು ಪರಾಭವಗೊಳಿಸಿದ್ದು, ಇದೀಗ ಲಿಜ್ ಟ್ರಸ್ ರಾಜೀನಾಮೆ ನೀಡಿರುವ ಕಾರಣ ರಿಷಿ ಆಯ್ಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.