alex Certify BREAKING NEWS: ಭೀಕರ ಸರಣಿ ಅಪಘಾತ; ಓರ್ವ ಸ್ಥಳದಲ್ಲೇ ಸಾವು, ಇನ್ನೋರ್ವನ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಭೀಕರ ಸರಣಿ ಅಪಘಾತ; ಓರ್ವ ಸ್ಥಳದಲ್ಲೇ ಸಾವು, ಇನ್ನೋರ್ವನ ಸ್ಥಿತಿ ಗಂಭೀರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಸರಣಿ ಅಪಘಾತ ನಡೆದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಇಂದಿರಾ ನಗರದ 80 ಫೀಟ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಅತಿ ವೇಗವಾಗಿ ಬಂದ ಬೆನ್ಜ್ ಕಾರು ಚಾಲಕನ ಅಜಾಗರೂಕತೆಯೇ ದುರಂತಕ್ಕೆ ಕಾರಣ ಎಂದು ತಿಳಿದುಬಂದಿದೆ.

ವೇಗವಾಗಿ ಬಂದ ಬೆನ್ಜ್ ಕಾರು ಎರಡು ಆಟೋ, ಎರಡು ಮಿನಿ ಲಾರಿಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹಲಸೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...