ಬೆಂಗಳೂರು: ಲಾಕ್ ಡೌನ್ ಏಕಾಏಕಿ ಸಡಿಲಗೊಳಿಸುವುದಿಲ್ಲ. ರಾಜ್ಯದಲ್ಲಿ 5 ಹಂತಗಳಲ್ಲಿ ಅನ್ ಲಾಕ್ ಪ್ರಕ್ರಿಯೆ ಜಾರಿ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಕೊರೊನಾ ‘ಲಸಿಕೆ’ ಪ್ರಮಾಣ ಪತ್ರದಲ್ಲಾದ ತಪ್ಪನ್ನು ಸರಿಪಡಿಸಲು ಇಲ್ಲಿದೆ ಮಾಹಿತಿ
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಹಂತ ಹಂತವಾಗಿ ಲಾಕ್ ಡೌನ್ ಸಡಿಲಿಸಲು ತೀರ್ಮಾನಿಸಲಾಗಿದೆ. ಪಾಸಿಟಿವಿಟಿ ರೇಟ್ ಗಮನಿಸಿ ಅನ್ ಲಾಕ್ ಮಾಡಲಾಗುತ್ತದೆ ಎಂದರು.
ಅಧಿಕಾರಿಗಳ ವರ್ಗಾವಣೆಯಲ್ಲ ಅಮಾನತು ಮಾಡಬೇಕಿತ್ತು; ಸಿಂಧೂರಿ ಮನೆ ಕರೆಂಟ್ ಬಿಲ್ ಬಗ್ಗೆ ಪ್ರಶ್ನಿಸಿದ ಶಾಸಕ; ರೋಹಿಣಿ ವಿರುದ್ಧ ಸಾ.ರಾ.ಮಹೇಶ್ ಮುಂದುವರೆದ ವಾಗ್ದಾಳಿ
ಅಗತ್ಯ ವಸ್ತುಗಳ ಖರೀದಿಗೆ ನೀಡಲಾಗಿದ್ದ ಬೆಳಿಗ್ಗೆ 6ರಿಂದ 10ಗಂಟೆವರೆಗಿನ ಅವಕಾಶವನ್ನು 12 ಗಂಟೆವರೆಗೆ ವಿಸ್ತರಿಸಲು ಹಾಗೂ ಪಾರ್ಕ್ ಗಳಲ್ಲಿ ವಾಕಿಂಗ್ ಮಾಡಲು ಅವಕಾಶ ನೀಡಲು ಚಿಂತನೆ ನಡೆಸಲಾಗಿದೆ. ಅಂತಿಮವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.