ಶಿವಮೊಗ್ಗ: ತಾಯಿ ಜೊತೆ ಆಸ್ಪತ್ರೆಯಲ್ಲಿದ್ದ ಅಪ್ರಾಪ್ತ ಬಾಲಕಿ ಮೇಲೆ ಆಸ್ಪತ್ರೆಯ ಸಿಬ್ಬಂದಿಗಳು ಗ್ಯಾಂಗ್ ರೇಪ್ ನಡೆಸಿರುವ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ.
ಆಸ್ಪತ್ರೆಯ ಡಿ ದರ್ಜೆಯ ನೌಕರ ಹಾಗೂ ಆತನ ಮೂವರು ಸ್ನೇಹಿತರು ಈ ದುಷ್ಕೃತ್ಯವೆಸಗಿದ್ದು, ಆರೋಪಿ ನೌಕರನನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.