ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಪ್ರಮುಖ ಆರೋಪಿಗಳಾದ ನರೇಶ್ ಗೌಡ ಹಾಗೂ ಶ್ರವಣ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ನ್ಯಾಯಾಲಯ ಆದೇಶ ನೀಡಿದೆ.
ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಹಾಗೂ ಬ್ಲ್ಯಾಕ್ ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ 91ನೇ ಸಿಸಿ ಹೆಚ್ ಕೋರ್ಟ್ ನರೇಶ್ ಗೌಡ ಹಾಗೂ ಶ್ರವಣ್ ಗೆ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ಕಿಂಗ್ ಪಿನ್ ಗಳೆಂದೇ ಆರೋಪಿಸಲಾಗುತ್ತಿರುವ ನರೇಶ್ ಹಾಗೂ ಶ್ರವಣ್, ಸಿಡಿ ಕೇಸ್ ಬಹಿರಂಗವಾದಾಗಿನಿಂದ ತಲೆಮರೆಸಿಕೊಂಡಿದ್ದು, ಬಂಧನ ಭೀತಿಯಲ್ಲಿದ್ದರು. ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು.