alex Certify BREAKING NEWS: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾದ ಆರೋಪಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ; ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾದ ಆರೋಪಿಗಳು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣದ ಪ್ರಮುಖ ಆರೋಪಿಗಳಾದ ನರೇಶ್ ಹಾಗೂ ಶ್ರವಣ್ ಇದೀಗ ಎಸ್ ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಬೆಂಗಳೂರಿನ ಆಡುಗೋಡಿಯಲ್ಲಿರುವ ಎಸ್ಐಟಿ ಟೆಕ್ನಿಕಲ್ ಸೆಂಟರ್ ಗೆ ಹಾಜರಾಗಿದ್ದು, ಇಬ್ಬರು ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ.

ರಾಜ್ಯದಲ್ಲಿ ಮತ್ತೆ ಕಿಚ್ಚು ಹಚ್ಚಿದ ನಾಯಕತ್ವ ಗೊಂದಲ; ಕುತೂಹಲ ಮೂಡಿಸಿದ ಶಾಸಕ ಬೆಲ್ಲದ್ ದೆಹಲಿ ಭೇಟಿ

ಸಿಡಿ ಕೇಸ್ ಬಹಿರಂಗವಾದಾಗಿನಿಂದ ತಲೆ ಮರೆಸಿಕೊಂಡಿದ್ದ ಆರೋಪಿಗಳು ಬಂಧನ ಭೀತಿ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನಿಗೆ ಕೋರ್ಟ್ ಮೆಟ್ಟಿಲೇರಿದ್ದರು. ಷರತ್ತು ಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದ ನ್ಯಾಯಾಲಯ, 5 ದಿನಗಳ ಒಳಗಾಗಿ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಇದೀಗ ನರೇಶ್ ಹಾಗೂ ಶ್ರವಣ್ ವಿಚಾರಣೆಗೆ ಹಾಜರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...