ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೊಂದು ಬಲಿಯಾಗಿದೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆ ರಸ್ತೆ ಗುಂಡಿ ತಪ್ಪಿಸಲು ಹೋಗಿ ಆಯತಪ್ಪಿ ಬಿದ್ದ ಪರಿಣಾಮ ಲಾರಿಯೊಂದು ಮಹಿಳೆ ಮೇಲೆ ಹರಿದಿದೆ.
ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆ ಎದುರುಗಡೆ ರಸ್ತೆಗುಂಡಿ ತಪ್ಪಿಸಲು ಹೋಗಿ ಬೈಕ್ ಸಮೇತ ಕೆಳಗೆಬಿದ್ದಿದ್ದಾರೆ. ಹಿಂದಿನಿಂದ ಬಂದ ಲಾರಿ ಮಹಿಳೆಯ ಮೇಲೆ ಹರಿದಿದೆ. ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಲಾರಿ ಚಾಲಕನನ್ನು ಹಿಡಿದ ಸಾರ್ವಜನಿಕರು ಬ್ಯಾಡರಹಳ್ಳಿ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ.