alex Certify BREAKING NEWS: ರಾಜಸ್ಥಾನದಲ್ಲಿ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ರಾಜಸ್ಥಾನದಲ್ಲಿ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರು ಅರೆಸ್ಟ್

ಕನಕಪುರದ ಸಾತನೂರು ಬಳಿ ಗೋ ಸಾಗಾಣಿಕೆ ವೇಳೆ ವ್ಯಕ್ತಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಪುನೀತ್ ಕೆರೆಹಳ್ಳಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ರಾಜಸ್ಥಾನದಲ್ಲಿ ಈ ಐವರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದ್ದು, ಪುನೀತ್ ಕೆರೆಹಳ್ಳಿ ಮತ್ತು ಇತರರ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಇವರುಗಳ ಬಂಧನಕ್ಕಾಗಿ ಪೊಲೀಸರು 4 ತಂಡಗಳನ್ನು ರಚಿಸಿದ್ದರು.

ಇದರ ಮಧ್ಯೆ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಿದ ಪುನೀತ್ ಕೆರೆಹಳ್ಳಿ, ನಾನು ಯಾವುದೇ ಅಪರಾಧ ಮಾಡಿಲ್ಲ. ದೇವಾಲಯಗಳಿಗೆ ಭೇಟಿ ನೀಡುತ್ತಿದ್ದ ಕಾರಣ ಮೊಬೈಲ್ ಸ್ವಿಚ್ ಆಫ್ ಮಾಡಿದ್ದೆ. ಪೊಲೀಸರ ತನಿಖೆಗೆ ಸಹಕರಿಸುವುದಾಗಿ ಹೇಳಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...