ಬೆಂಗಳೂರು: ಫೆಬ್ರವರಿ 14ರಿಂದ ವಿಧಾನಮಂಡಲ ಅಧಿವೇಶನ ಆರಂಭ ಹಿನ್ನೆಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಫೆ.14ರಿಂದ 25ರವರೆಗೆ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ವಿಧಾನಸೌಧದ ಸುತ್ತಮುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಅಧಿವೇಶನದ ವೇಳೆ ಯಾವುದೇ ರೀತಿಯ ಪ್ರತಿಭಟನೆ, ವಿಧಾನಸೌಧಕ್ಕೆ ಮುತ್ತಿಗೆಗೆ ಅವಕಾಶವಿಲ್ಲ. ಬೆಳಿಗ್ಗೆ 6ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.