ಮಣಿಪುರದ ನೋನಿ ಜಿಲ್ಲೆಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಹತ್ತಕ್ಕೂ ಅಧಿಕ ವಿದ್ಯಾರ್ಥಿಗಳು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ತಂಬ್ಲಾನು ಐಯರ್ ಸೆಕೆಂಡರಿ ಸ್ಕೂಲ್ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ಸಿಗೆ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಮತ್ತೊಂದು ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಲಾಂಗ್ಸಾಯಿ ತುಂಬಂಗ ಗ್ರಾಮ ಸಮೀಪದ ವಿಷ್ಣುಪುರ್ ಕೋಪಂ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಇಂಪಾಲದ ಮೆಡಿಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಗೊಂಡಿರುವವರ ಪೈಕಿ ಹಲವು ವಿದ್ಯಾರ್ಥಿಗಳ ಪರಿಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಭೀತಿ ವ್ಯಕ್ತವಾಗಿದೆ.