alex Certify BREAKING NEWS: ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ವಿದ್ಯಾರ್ಥಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ವಿದ್ಯಾರ್ಥಿ ದುರ್ಮರಣ

ಗದಗ: ಅತಿಥಿ ಸಹ ಶಿಕ್ಷಕಿ ಹಾಗೂ ವಿದ್ಯಾರ್ಥಿಯ ಮೇಲೆ ಅತಿಥಿ ಶಿಕ್ಷಕನೊಬ್ಬ ಮನಬಂದಂತೆ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ.

ಹದ್ಲಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿ ಎಂಬಾತ ಅತಿಥಿ ಶಿಕ್ಷಕಿ ಗೀತಾ ಬಾರಕೇರಿ ಹಾಗೂ ವಿದ್ಯಾರ್ಥಿ ಭರತ್ ಮೇಲೆ ಸಲಾಕೆಯಿಂದ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ 10 ವರ್ಷದ ಭರತ್ ದಾರುಣವಾಗಿ ಸಾವನ್ನಪ್ಪಿದ್ದಾನೆ

ಶಿಕ್ಷಕ ಮುತ್ತಪ್ಪ ಹಡಗಲಿ ಹುಚ್ಚಾಟಕ್ಕೆ ವಿದ್ಯಾರ್ಥಿಗಳು ಕಂಗಾಲಾಗಿದ್ದಾರೆ. ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...