alex Certify BREAKING NEWS: ಸಿಎಂ ಬದಲಾವಣೆಗೆ ಕೆಲವರಿಂದ ಪ್ರಸ್ತಾಪ; ಶಾಕಿಂಗ್ ಹೇಳಿಕೆ ನೀಡಿದ ಸಚಿವ ಈಶ್ವರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸಿಎಂ ಬದಲಾವಣೆಗೆ ಕೆಲವರಿಂದ ಪ್ರಸ್ತಾಪ; ಶಾಕಿಂಗ್ ಹೇಳಿಕೆ ನೀಡಿದ ಸಚಿವ ಈಶ್ವರಪ್ಪ

ಬೆಂಗಳೂರು: ರಾಜ್ಯಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿಗೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನೀಡಿರುವ ಹೇಳಿಕೆ ಕುತೂಹಲಕ್ಕೆ ಕಾರಣವಾಗಿದ್ದು, ಕೆಲವರು ಸಿಎಂ ಬದಲಾವಣೆಗೆ ಪ್ರಸ್ತಾಪಿಸಿದ್ದಾರೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರಪ್ಪ, ರಾಜ್ಯ ಬಿಜೆಪಿಯಲ್ಲಿ ಗೊಂದಲಗಳಿರುವುದನ್ನು ನಾನೂ ಒಪ್ಪುತ್ತೇನೆ. ಕೆಲವರು ಸಿಎಂ ಬದಲಾವಣೆಯಾಗಬೇಕು ಎಂದು ಪ್ರಸ್ತಾಪ ಮಾಡಿದ್ದಾರೆ. ಇನ್ನೂ ಕೆಲವರು ಬಿ ಎಸ್ ವೈ ಮುಂದುವರೆಯಬೇಕು ಎಂದು ಹೇಳುತ್ತಿದ್ದಾರೆ. ಮತ್ತೆ ಕೆಲವರು ದೆಹಲಿಗೂ ಹೋಗಿ ಬಂದಿದ್ದಾರೆ. ಹಾಗಾಗಿ ಹಲವು ಗೊಂದಲಗಳಿರುವುದು ನಿಜ ಎಂದರು.

ಕಾರಿನೊಳಗೆ ಲಾಕ್ ಆಗಿದ್ದ ನಾಯಿ ರಕ್ಷಿಸಿದ ಪೊಲೀಸರು: ಗಾಜು ಒಡೆದಿದ್ದೇಕೆ ಎಂದು ಪ್ರಶ್ನಿಸಿದ ಮಾಲಕಿ

ಯತ್ನಾಳ್, ಸಿ.ಪಿ.ಯೋಗೇಶ್ವರ್ ಸರ್ಕಾರ ಹಾಗೂ ಸಿಎಂ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದಾಗ ಅವರ ಜೊತೆ ಚರ್ಚೆ ನಡೆಸಿ ಬಹಿರಂಗವಾಗಿ ಹೇಳಿಕೆಗಳನ್ನು ನೀಡಬೇಡಿ, ಪಕ್ಷದ ಚೌಕಟ್ಟಿನಲ್ಲಿ ಚರ್ಚಿಸಿ ಅಸಮಾಧಾನ ಬಗೆಹರಿಸಿಕೊಳ್ಳಿ ಎಂದು ಸೂಚಿಸಿದ್ದೆ. ಇನ್ನು ರೇಣುಕಾಚಾರ್ಯ ಸಹಿ ಸಂಗ್ರಹಕ್ಕೂ ಅಂತಹ ಯಾವ ಅಭಿಯಾನವಿಲ್ಲ ಎಂದು ಅವರಿಗೆ ತಿಳಿಸಿದ್ದೆ. ನಾಯಕತ್ವ ಬದಲಾವಣೆ ಚರ್ಚೆ ನಡೆಯುತ್ತಿರುವುದು, ಗೊಂದಲವಿರುದು ನಿಜ. ಅರುಣ್ ಸಿಂಗ್ ಬಂದು ಹೋದ ಬಳಿಕ ಸಮಸ್ಯೆ ಪರಿಹಾರವಾಗುತ್ತೆ. ಏನೇ ತೀರ್ಮಾನವನ್ನು ತೆಗೆದುಕೊಳ್ಳುವುದಾದರೂ ಹೈಕಮಾಂಡ್ ನಿರ್ಧರಿಸುತ್ತೆ. ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ ಎಂದು ಮಾರ್ಮಿಕವಾಗಿ ನುಡಿದರು.

ವಾರ್ಸಾದ ಪುಷ್ಪೋದ್ಯಾನದಲ್ಲಿ ಅರಳಿ ನಿಂತ ದೈತ್ಯ ಪುಷ್ಪ

ಇದೇ ವೇಳೆ 17 ಶಾಸಕರು ಬಂದು ಗೊಂದಲ ಸೃಷ್ಟಿಸಿದ್ದಾರೆ ಎಂಬ ಅರ್ಥದಲ್ಲಿ ನಾನು ಹೇಳಿಲ್ಲ. ಅವರು ಬಂದಿದ್ದರಿಂದಲೇ ಸರ್ಕಾರ ರಚನೆಯಾಗಿದೆ ಹೀಗಾಗಿ ಅವರ ಋಣ ನಮ್ಮ ಮೇಲಿದೆ. ಆದರೆ ಬಿಜೆಪಿಗೆ ಬಹುಮತವಿದ್ದಿದ್ದರೆ ಯಾವುದೇ ಗೊಂದಲವಾಗುತ್ತಿರಲಿಲ್ಲ ಎಂದು ನಾನು ಹೇಳಿದ್ದು ಎಂದು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...