ಶಾಲೆಗಳಲ್ಲಿ ಹಿಜಾಬ್ ಧರಿಸುವ ಕುರಿತಂತೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ವಿಭಿನ್ನ ತೀರ್ಪು ನೀಡಿದ್ದು, ಹೀಗಾಗಿ ಪ್ರಕರಣ ಈಗ ಮುಖ್ಯ ನ್ಯಾಯಮೂರ್ತಿಗಳ ಅಂಗಳಕ್ಕೆ ಬಂದಿದೆ.
ನ್ಯಾಯಮೂರ್ತಿ ಹೇಮಂತ್ ಗುಪ್ತಾ, ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿದ್ದ ಮುಸ್ಲಿಂ ವಿದ್ಯಾರ್ಥಿನಿಯರ ಮೇಲ್ಮನವಿ ವಜಾಗೊಳಿಸಿದರೆ, ಮತ್ತೊಬ್ಬ ನ್ಯಾಯಮೂರ್ತಿ ಹಿಮಾಂಶು, ಸಮವಸ್ತ್ರ ನೀತಿ ಪಾಲಿಸುವಂತೆ ನೀಡಿದ್ದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿದ್ದಾರೆ.
ಹೀಗಾಗಿ ಪ್ರಕರಣ ಈಗ ಮುಖ್ಯ ನ್ಯಾಯಮೂರ್ತಿಗಳ ಅಂಗಳಕ್ಕೆ ಬಂದಿದ್ದು, ವಿಸ್ತೃತ ಪೀಠ ರಚನೆಯಾಗುವವರೆಗೂ ಈ ಹಿಂದೆ ಕರ್ನಾಟಕ ಹೈಕೋರ್ಟ್ ಆದೇಶ ಯಥಾಸ್ಥಿತಿಯಲ್ಲಿ ಇರಲಿದೆ ಎಂದು ತಿಳಿದು ಬಂದಿದೆ. ಹೀಗಾಗಿ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಶಾಲೆಯಲ್ಲಿ ನಿಗದಿಪಡಿಸಿದ ಸಮವಸ್ತ್ರ ಧರಿಸುವುದು ಕಡ್ಡಾಯವಾಗಿದೆ.