ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 41,806 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 3,09,87,880ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 581 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,11,989 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 4,32,041 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 24 ಗಂಟೆಯಲ್ಲಿ 39,130 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 3,01,43,850 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ 19,43,488 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 43,80,11,958 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ಕಳೆದ 24ಗಂಟೆಯಲ್ಲಿ 34,97,058 ಜನರಿಗೆ ವ್ಯಾಕ್ಸಿನ್ ಹಾಕಲಾಗಿದೆ. ದೇಶದಲ್ಲಿ ಈವರೆಗೆ 39,13,40,491 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಆನ್ ಲೈನ್ ಮೂಲಕ ಮದ್ಯ ಮಾರಾಟಕ್ಕೆ ಮುಂದಾದ ಅಸ್ಸಾಂ ಸರ್ಕಾರ: ಕೊರೊನಾ ಎರಡನೇ ಅಲೆ ಆರ್ಭಟದ ನಡುವೆ ಮದ್ಯ ಮಾರಾಟಕ್ಕಾಗಿ ಅಸ್ಸಾಂ ಸರ್ಕಾರ ಆನ್ ಲೈನ್ ಮೂಲಕ ಮದ್ಯ ಮಾರಾಟಕ್ಕೆ ತೀರ್ಮಾನಿಸಿದೆ. ಆರಂಭಿಕ ಹಂತವಾಗಿ ಗುವಾಹಟಿಯಲ್ಲಿ ಇದು ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.