ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಕುಸಿತಗೊಳ್ಳುತ್ತಿದೆ. ಕಳೆದ 24 ಗಂಟೆಯಲ್ಲಿ ಕೇವಲ 3,805 ಜನರಲ್ಲಿ ಸೋಂಕು ಪತ್ತೆಯಾಗಿದೆ.
ದೇಶದಲ್ಲಿ ಈವರೆಗೆ 5,28,655 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 38,293 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.72ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,24,164 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 16,29,137 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,18,68,45,847 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,95,416 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.