ದೇಶದಲ್ಲಿ ಕೊರೊನಾ ಮತ್ತೆ ಏರಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಕೆಲವೊಂದು ರಾಜ್ಯಗಳು ಇದರ ನಿಯಂತ್ರಣಕ್ಕಾಗಿ ಒಂದೊಂದೇ ನಿರ್ಬಂಧಗಳನ್ನು ಹೇರುತ್ತಿವೆ. ಕೊರೊನಾ ನಾಲ್ಕನೇ ಆಲೆ ದೇಶದಲ್ಲಿ ಈಗಾಗಲೇ ಕಾಣಿಸಿಕೊಂಡಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಜೂನ್ ವೇಳೆಗೆ ಇದು ತಾರಕಕ್ಕೇರಲಿದೆ ಎನ್ನಲಾಗಿದೆ.
ನಾಲ್ಕನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಬಹುದೆಂದು ತಜ್ಞರು ಅಂದಾಜಿಸಿದ್ದಾರೆ. ಹೀಗಾಗಿ ಭಾರತೀಯ ಔಷಧ ಮಹಾನಿಯಂತ್ರಕರ ಕಚೇರಿ (ಡಿಸಿಜಿಐ) ತುರ್ತು ಸಂದರ್ಭಗಳಲ್ಲಿ 6 ರಿಂದ 12 ವರ್ಷದ ಮಕ್ಕಳಿಗೆ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಬಳಸಬಹುದೆಂದು ಗ್ರೀನ್ ಸಿಗ್ನಲ್ ನೀಡಿದೆ.
ಈಗಾಗಲೇ 18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ಗಳನ್ನು ನೀಡಲಾಗುತ್ತಿದ್ದು, ಇದನ್ನು ಪಡೆಯುವುದರ ಮೂಲಕ ನಾಲ್ಕನೇ ಅಲೆಯನ್ನು ಸಮರ್ಥವಾಗಿ ಎದುರಿಸಬಹುದು ಎಂಬ ಅಭಿಪ್ರಾಯ ತಜ್ಞರಿಂದ ವ್ಯಕ್ತವಾಗಿದೆ.