ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಜಾಲಿ ರೈಡ್ ಹೊರಟಿದ್ದ ಬೈಕ್ ಸವಾರರು ಫ್ಲೈಓವರ್ ತಡೆಗೋಡೆಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಪದ್ಮನಾಭನಗರದ ದೇವೇಗೌಡ ಪೆಟ್ರೋಲ್ ಬಂಕ್ ಬಳಿ ಈ ಘಟನೆ ನಡೆದಿದೆ. ತಡರಾತ್ರಿ ಸ್ನೇಹಿತರ ಜೊತೆಗೆ ತಡರಾತ್ರಿ 2 ಗಂಟೆ ಸುಮಾರಿಗೆ ಜಾಲಿ ರೈಡ್ ಹೊರಟಿದ್ದ ಯಶವಂತ ಹಾಗೂ ಟೆಕ್ಕಿ ರಾಮಕುಮಾರ್ ಫ್ಲೈಓವರ್ ಗೆ ಡಿಕ್ಕಿ ಹೊಡೆದ ಪರಿಣಾಮ ಫ್ಲೈಓವರ್ ಮೇಲಿಂದ ಬಿದ್ದು ರಾಮಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಯಶವಂತ್ ಗಂಭೀರವಾಗಿ ಗಾಯಗೊಂಡಿದ್ದಾರೆ.ಬನಶಂಕರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.