ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು ಮಹತ್ವದ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. ಈಗಾಗಲೇ 13 ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಇದೀಗ 14 ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದ್ದು, ಆಗಸ್ಟ್ ತಿಂಗಳಲ್ಲಿ ಗೃಹಜ್ಯೋತಿ ಯೋಜನೆ ಅಧಿಕೃತವಾಗಿ ಜಾರಿಗೆ ಬರಲಿದೆ. 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಬೇಕಾಗಿರುವುದರಿಂದ ವಾರ್ಷಿಕವಾಗಿ 52 ಸಾವಿರ ಕೋಟಿ ರೂ. ಬೇಕಾಗುತ್ತದೆ ಎಂದು ಹೇಳಿದ್ದಾರೆ.
ಅನುಗ್ರಹ ಯೋಜನೆ ಮರು ಜಾರಿ ಮಾಡಲಾಗುವುದು, ರೈತರಿಗೆ 3 ರಿಂದ 5 ಲಕ್ಷ ರೂ.ವರೆಗೆ ಅಲ್ಪಾವಧಿ ಸಾಲ ನೀಡಲಾಗುವುದು. ಮೈಸೂರು-ಕಲಬುರಗಿಯಲ್ಲಿ ಟ್ರಾಮಾ ಸೆಂಟರ್ ಗೆ ಅನುದಾನ, ನಮ್ಮ ಮೆಟ್ರೋಗೆ 30,000 ಕೋಟಿ ರೂ. ನೀಡಲಾಗುವುದು ಎಂದು ತಿಳಿಸಿದ್ದಾರೆ.