ದಾಮೋಹ್: ಪ್ರಧಾನಿ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ರಾಜಾ ಪಟಾರಿಯಾ ಅವರನ್ನು ಬಂಧಿಸಲಾಗಿದೆ. ಸಂವಿಧಾನ ರಕ್ಷಿಸಲು ಪ್ರಧಾನಿ ಮೋದಿ ಅವರನ್ನು ಹತ್ಯೆ ಮಾಡಿ ಎಂದು ರಾಜಾ ಪಟಾರಿಯಾ ಹೇಳಿಕೆ ನೀಡಿದ್ದರು.
‘ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಿ’ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಜಾ ಪಟೇರಿಯಾ ಅವರನ್ನು ಮಂಗಳವಾರ ಬಂಧಿಸಲಾಗಿದೆ. ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಹಟಾ ನಿವಾಸದಲ್ಲಿ ಅವರನ್ನು ಬಂಧಿಸಲಾಗಿದೆ.
ಸಂವಿಧಾನವನ್ನು ಉಳಿಸಲು ಪ್ರಧಾನಿ ನರೇಂದ್ರ ಮೋದಿಯವರನ್ನು “ಕೊಲ್ಲಲು” ಸಭೆಯೊಂದರಲ್ಲಿ ಹೇಳಿದ ನಂತರ ರಾಜಾ ಪಟೇರಿಯಾ ಸಂಕಷ್ಟಕ್ಕೆ ಸಿಲುಕಿದರು. ಅವರ ಹೇಳಿಕೆ ವಿರುದ್ಧ ತೀವ್ರ ಆಕ್ರೋಶ, ಟೀಕೆ ವ್ಯಕ್ತವಾಗಿತ್ತು.
ಮೋದಿ ಧರ್ಮ, ಜಾತಿ, ಭಾಷೆಯ ಆಧಾರದ ಮೇಲೆ ವಿಭಜನೆ ಮಾಡುತ್ತಾರೆ. ದಲಿತರು, ಬುಡಕಟ್ಟುಗಳು ಮತ್ತು ಅಲ್ಪಸಂಖ್ಯಾತರ ಜೀವನ ಅಪಾಯದಲ್ಲಿದೆ. ಸಂವಿಧಾನವನ್ನು ಉಳಿಸಬೇಕಾದರೆ ಮೋದಿಯನ್ನು ಕೊಲ್ಲಲು ಸಿದ್ಧರಾಗಿ ಎಂದು ಅವರು ಹೇಳಿದ್ದರು.
ನಾನು ಈ ರೀತಿ ಮಾತನಾಡಿಲ್ಲ, ಸಂವಿಧಾನ ಉಳಿಸಲು ಮೋದಿಯನ್ನು ಸೋಲಿಸಬೇಕಾದ ರಾಜಕೀಯ ವಾತಾವರಣವನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಅಲ್ಪಸಂಖ್ಯಾತರು, ದಲಿತರು, ಆದಿವಾಸಿಗಳ ರಕ್ಷಣೆ ಮತ್ತು ನಿರುದ್ಯೋಗವನ್ನು ತೊಡೆದುಹಾಕಲು ಮೋದಿಯನ್ನು ಸೋಲಿಸುವುದು ಅವಶ್ಯಕ. ‘ಮೋದಿ ಹತ್ಯೆ’ಗೆ ಸಂಬಂಧಿಸಿದಂತೆ ನನ್ನ ಉದ್ದೇಶವನ್ನು ಸಂಪೂರ್ಣವಾಗಿ ತಪ್ಪಾಗಿ ಬಿಂಬಿಸಲಾಗಿದೆ ಎಂದು ರಾಜಾ ಪಟಾರಿಯಾ ಹೇಳಿದ್ದಾರೆ.