ಬೆಂಗಳೂರು: ಎಫ್ ಎಸ್ ಎಲ್ ಮಹಿಳಾ ಅಧಿಕಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮಡಿವಾಳದಲ್ಲಿ ನಡೆದಿದೆ.
ಶ್ರುತಿ ಆತ್ಮಹತ್ಯೆಗೆ ಶರಣಾಗಿರುವ ಎಫ್ ಎಸ್ ಎಲ್ ಅಧಿಕಾರಿ. ಮಡಿವಾಳ ಬಳಿಯ ಅಪಾರ್ಟ್ ಮೆಂಟ್ ನಲ್ಲಿ ಶ್ರುತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದ್ದು, ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಉಲ್ಲೇಖಿಸಿದ್ದಾರೆ.
ಇತ್ತೀಚೆಗೆ ಶ್ರುತಿ ಪತಿಯಿಂದ ವಿಚ್ಛೇದನ ಪಡೆದುಕೊಂಡಿದ್ದರು. ಮಡಿವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.