ಕೋಲಾರ : ಕೋಲಾರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಐಎಎಸ್ ಅಧಿಕಾರಿ ಅಕ್ರಂ ಪಾಷ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಅಕ್ರಂ ಪಾಷ ಅವರು ಈ ಮೊದಲು ಕಾರ್ಮಿಕ ಇಲಾಖೆ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಕೋಲಾರದ ಜಿಲ್ಲಾಧಿಕಾರಿಯಾಗಿದ್ದ ವೆಂಕಟ ರಾಜಾ ಅವರನ್ನು ಕೊಡಗು ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ. ವೆಂಟಕ ರಾಜ ಅವರು ಜನವರಿ 25 ರಂದು ಅಧಿಕಾರ ಸ್ವೀಕರಿಸಿದ್ದರು. ಇನ್ನೂ, ಕೋಲಾರ ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಯಾಗಿ ಡಾ ಏಕ್ ರೂಪ್ ಕೌರ್ ಅವರನ್ನು ನಿಯೋಜಿಸಲಾಗಿದೆ.