ನವದೆಹಲಿ : ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 423 ಕೋವಿಡ್ -19 ಪ್ರಕರಣಗಳು ವರದಿಯಾಗಿವೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 423 ಕೋವಿಡ್ -19 ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ಈಗ 3,420 ಸಕ್ರಿಯ ಪ್ರಕರಣಗಳಿವೆ. ಹೆಚ್ಚಿನ ಸೋಂಕುಗಳು ಕೇರಳದಿಂದ ವರದಿಯಾಗಿವೆ, ಒಬ್ಬರು ಸಾವನ್ನಪ್ಪಿದ್ದಾರೆ.