ವಯನಾಡ್: ಕೇರಳದ ವಯನಾಡಿನಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಕೇರಳ ಪೊಲೀಸರು ಶುಕ್ರವಾರ ಹೇಳಿದ್ದಾರೆ.
ಈ ದಾಳಿಯಲ್ಲಿ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ(ಎಸ್‌ಎಫ್‌ಐ) ಪಾತ್ರವಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ.
ರಾಹುಲ್ ಗಾಂಧಿ ಅವರ ವಯನಾಡ್ ಕಚೇರಿ ಮೇಲೆ ನಡೆದ ದಾಳಿಯ ದೃಶ್ಯಗಳನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. ಸಿಪಿಐ(ಎಂ) ಕಾರ್ಯಕರ್ತರೇ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಕೇರಳ ಸಿಎಂ ಪಿಣರಾಯಿ ವಿಜಯನ್ ಮತ್ತು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರನ್ನು ಟ್ಯಾಗ್ ಮಾಡಿದ ತರೂರ್, ಇದು ರಾಜಕೀಯವೇ ಎಂದು ಪ್ರಶ್ನಿಸಿದ್ದಾರೆ.
ಭಾರತೀಯ ಯುವ ಕಾಂಗ್ರೆಸ್(ಐವೈಸಿ), ರಾಹುಲ್ ಗಾಂಧಿ ಅವರ ವಯನಾಡ್ ಕಚೇರಿಯ ಗೋಡೆಯನ್ನು ಹತ್ತಿ ಅದನ್ನು ಧ್ವಂಸಗೊಳಿಸಿದಾಗ “ಗೂಂಡಾಗಳು ಎಸ್‌ಎಫ್‌ಐ ಧ್ವಜಗಳನ್ನು ಹಿಡಿದಿದ್ದಾರೆ” ಎಂದು ಟ್ವೀಟ್ ನಲ್ಲಿ ಆರೋಪಿಸಿದೆ. ರಾಹುಲ್ ಗಾಂಧಿ ಉತ್ತರ ಕೇರಳದ ಗುಡ್ಡಗಾಡು ಜಿಲ್ಲೆ ವಯನಾಡ್ ಕ್ಷೇತ್ರದ ಸಂಸದರಾಗಿದ್ದಾರೆ.