ನವದೆಹಲಿ: ಗುಜರಾತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ರ್ಯಾಲಿ ವೇಳೆ ಭಾರಿ ಭದ್ರತಾ ಲೋಪ ಕಂಡು ಬಂದಿದೆ. ಗುಜರಾತ್ ಬಾವ್ಲಾ ನಗರದಲ್ಲಿ ಪ್ರಧಾನಿ ರ್ಯಾಲಿ ಘಟನೆ ನಡೆದಿದೆ.
ಓರ್ವ ಶಂಕಿತನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಪ್ರಧಾನಿ ಕಾರ್ಯಕ್ರಮದ ವೇದಿಕೆ ಬಳಿ ಡ್ರೋನ್ ಹಾರಿಸಿದ್ದ ಶಂಕಿತನ ವಶಕ್ಕೆ ಪಡೆಯಲಾಗಿದೆ.
ಇಂದು ಗುಜರಾತ್‌ನ ಬಾವ್ಲಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿಯಲ್ಲಿ ಭದ್ರತಾ ಲೋಪ ಸಂಭವಿಸಿದೆ. ರಾಷ್ಟ್ರೀಯ ಭದ್ರತಾ ಪಡೆ(ಎನ್‌ಎಸ್‌ಜಿ) ಡ್ರೋನ್ ಹೊಡೆದುರುಳಿಸಿ ಒಬ್ಬ ವ್ಯಕ್ತಿಯನ್ನು ಕಸ್ಟಡಿಗೆ ತೆಗೆದುಕೊಂಡಿದೆ.
ಮೂಲಗಳ ಪ್ರಕಾರ, ಡ್ರೋನ್ ನಿರಾಯುಧವಾಗಿತ್ತು ಆದರೆ ಅದು ಕಡಿಮೆ ಎತ್ತರದಲ್ಲಿ ಹಾರುತ್ತಿತ್ತು. ವೇದಿಕೆಯತ್ತ ಸಾಗುತ್ತಿತ್ತು. ಘಟನೆಯ ಕುರಿತು ಬಹುಸಂಸ್ಥೆಯ ತನಿಖೆ ಪ್ರಾರಂಭಿಸಲಾಗಿದೆ.
ಮುಂಬರುವ ಗುಜರಾತ್ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಪರ ಪ್ರಚಾರ ನಡೆಸುತ್ತಿರುವ ಪ್ರಧಾನಿ ಮೋದಿ ಇಂದು ಬಾವ್ಲಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.