ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ‘NIA’ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ. ರಾಮೇಶ್ವರಂ ಕೆಫೆಗೆ ದೌಡಾಯಿಸಿದ ತನಿಖಾಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ.
ಕೆಫೆಯ ಕ್ಯಾಶ್ ಕೌಂಟರ್, ಸಿಸಿಟಿವಿ ಕ್ಯಾಮರಾ ಪರಿಶೀಲನೆ ನಡೆಸಿದ ತನಿಖಾಧಿಕಾರಿಗಳು ಸಿಬ್ಬಂದಿಯಿಂದ ಹಲವು ಮಾಹಿತಿಗಳನ್ನು ಕಲೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ.
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಎನ್ ಐ ಎ ಅಧಿಕಾರಿಗಳು ಚೆನ್ನೈ ನಲ್ಲಿ ಐವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಳೆದ ವಾರ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಸಂಭವಿಸಿ, 10 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಪ್ರಕರಣದ ಪ್ರಮುಖ ಆರೋಪಿಗಾಗಿ ಎನ್ ಐ ಎ ತೀವ್ರ ಶೋಧ ನಡೆಸುತ್ತಿದೆ.