ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಲ್ಲಿ ಎನ್ ಐ ಎ ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದುಕೊಂಡಿದೆ.
ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿನ ಓರ್ವನ ಮನೆ ಮೇಲೆ ದಾಳಿ ನಡೆಸಲಾಗಿದ್ದು, ದಾಳಿಯಲ್ಲಿ ಭಯೋತ್ಪಾದಕ ಸಂಘಟನೆ ಜೊತೆ ಸಂಪರ್ಕ ಹೊಂದಿರವ ಆರೋಪದ ಮೇಲೆ ಅಬ್ದುಲ್ ಸುಕ್ಕೂರ್ ಎಂಬುವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಅಬ್ದುಲ್ ಶುಕ್ಕೂರ್ ನಿಷೇಧಿತ ಪಿಎಫ್ಐ ಸಂಘಟನೆಯ ಸದಸ್ಯನಾಗಿದ್ದಾನೆ. ಅಬ್ದುಲ್ ಸುಕ್ಕೂರ್ ವಿರುದ್ಧ ಭಯೋತ್ಪಾದನಾ ಚಟುವಟಿಕೆಗೆ ಪ್ರಚೋದನೆ ನೀಡಿರುವ ಆರೋಪ ಕೇಳಿಬಂದಿದೆ. ರಾಮೇಶ್ವರಂ ಕೆಫೆ ಸ್ಪೋಟ, ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಈತ ಭಾಗಿಯಾಗಿರುವ ಶಂಕೆ ಹಿನ್ನೆಲೆ ಅಬ್ದುಲ್ ಸುಕ್ಕೂರ್ ನನ್ನು ವಶಕ್ಕೆ ಪಡೆದಿದೆ.