alex Certify BREAKING : ಬೆಂಗಳೂರಿನಲ್ಲಿ `NIA’ ದಾಳಿ : ಮೂವರು ಅಕ್ರಮ ಬಾಂಗ್ಲಾ ವಲಸಿಗರು ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ `NIA’ ದಾಳಿ : ಮೂವರು ಅಕ್ರಮ ಬಾಂಗ್ಲಾ ವಲಸಿಗರು ವಶಕ್ಕೆ

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದಾರೆ.

ಇಂದು ಬೆಳಗ್ಗೆ ಪ್ರಕರಣವೊಂದರ ತನಿಖೆಗೆ ಆಗಮಿಸಿದ್ದ ಎನ್ ಐಎ ಅಧಿಕಾರಿಗಳು ಬೆಳ್ಳಂದೂರು ಭಾಗದಲ್ಲಿ ಪರಿಶೀಲನೆ ವೇಳೆ ಮೂವರು ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಖಲೀಲ್, ಅಬ್ದುಲ್, ಮೊಹಮ್ಮದ್ ಜಾಹಿದ್ ಎಂದು ಗುರುತಿಸಲಾಗಿದೆ.

ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ಮೂವರು ಬಾಂಗ್ಲಾ ಪ್ರಜೆಗಳು ಅಕ್ರಮವಾಗಿ ನೆಲೆಸಿರುವುದು ಪತ್ತೆಯಾಗಿದ್ದು, ಈ ವೇಳೆ ವಶಕ್ಕೆ ಪಡೆದ ಎನ್ ಐಎ ಅಧಿಕಾರಿಗಳು ಬೆಳ್ಳಂದೂರು ಪೊಲೀಸರಿಗೆ ಅಕ್ರಮ ವಲಸಿಗರನ್ನು ಒಪ್ಪಿಸಿದ್ದಾರೆ. ಅಕ್ರಮ ವಲಸಿಗರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...