ಬೆಂಗಳೂರು : ಹೊಸ ವರ್ಷ, ಕ್ರಿಸ್ ಮಸ್ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದಲ್ಲಿ ‘ಕೊರೊನಾ ಸೋಂಕು’ ಭೀತಿ ಹಿನ್ನೆಲೆ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ. ಸಭೆ ಬಳಿಕ ಮಾತನಾಡಿದ ಅವರು ಹೊಸ ವರ್ಷ, ಕ್ರಿಸ್ ಮಸ್ ವರ್ಷಾಚರಣೆಗೆ ಯಾವುದೇ ನಿರ್ಬಂಧವಿಲ್ಲ, ಆದರೆ ಎಚ್ಚರ ವಹಿಸಿ. ಜನಸಂದಣಿ ಇರುವ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ಕೊರೊನಾಗೆ ಭಯ ಪಡುವ ಅಗತ್ಯವಿಲ್ಲ ಎಂದರು.
ಹೆಚ್ಚು ಜನರ ಸಂಪರ್ಕಕಕ್ಕೆ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಪ್ರತಿನಿತ್ಯ 5 ಸಾವಿರಕ್ಕೂ ಹೆಚ್ಚು ಕೊರೊನಾ ಟೆಸ್ಟಿಂಗ್ ಮಾಡಲು ಸೂಚನೆ ನೀಡಲಾಗಿದೆ. ಕರ್ನಾಟಕದಲ್ಲಿ 92 ಸಕ್ರಿಯ ಪ್ರಕರಣಗಳಿದೆ, ಮೂವರು ಸಾವನ್ನಪ್ಪಿದ್ದಾರೆ, ಮೃತಪಟ್ಟವರು ಕೊರೊನಾದಿಂದಲೇ ಸಾವನ್ನಪ್ಪಿದ್ದು ಎಂದು ಹೇಳುವುದಕ್ಕೆ ಆಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮಾಧ್ಯಮದವರು, ಚಾನಲ್ ನವರು ಅನಗತ್ಯ ಪ್ಯಾನಿಕ್ ಸೃಷ್ಟಿಸಬಾರದು. ಆತಂಕ ಪಡಬೇಕಾದ ಸಂದರ್ಭವೇ ಬಂದಿಲ್ಲ. ಪರಿಸ್ಥಿತಿ ನೋಡಿಕೊಂಡು ಡೆಡಿಕೇಡೆಡ್ ಆಸ್ಪತ್ರೆಗಳನ್ನು ನಿಗಧಿ ಮಾಡುತ್ತೇವೆ. ಈಗಲೇ ಎಲ್ಲರೂ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎನ್ನುವ ಸಲಹೆ ತಾಂತ್ರಿಕ ಸಲಹಾ ಸಮಿತಿ ಮತ್ತು ತಜ್ಞರಿಂದ ಬಂದಿದೆ ಎಂದರು.