ಪ್ರಧಾನಿ ಮೋದಿಗೆ ‘ಅಪಶಕುನ ‘ ಎಂದ ರಾಹುಲ್ ಗಾಂಧಿಗೆ ಕೇಂದ್ರ ಚುನಾವಣಾ ಆಯೋಗ ನೋಟಿಸ್ ನೀಡಿದೆ.
ಕಳೆದ ಭಾನುವಾರ ನವೆಂಬರ್ 19 ರಂದು ಗುಜರಾತ್ನ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಏಕದಿನ ಕ್ರಿಕೆಟ್ ವಿಶ್ವ ಕಪ್ ಪಂದ್ಯಾವಳಿಯ ಫೈನಲ್ ಪಂದ್ಯ ನಡೆದಿತ್ತು. ಈ ಪಂದ್ಯದ ವೀಕ್ಷಣೆಗೆ ಪ್ರಧಾನಿ ಮೋದಿ ತೆರಳಿದ್ದರು. ಫೈನಲ್ನಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ ಭಾರತ ಸೋತು ವಿಶ್ವಕಪ್ ಟ್ರೋಫಿಯಿಂದ ವಂಚಿತವಾಗಿತ್ತು.
ಈ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಂದ್ಯ ವೀಕ್ಷಿಸಲು ಪ್ರಧಾನಿ ಮೋದಿ ಹೋಗಿದ್ದರಿಂದಲೇ ಭಾರತ ಸೋಲು ಕಂಡಿತು ಎಂದು ವ್ಯಂಗ್ಯವಾಡಿದ್ದರು. ಪಿಎಂ ಎಂದರೆ ‘ಪನೌತಿ ಮೋದಿ’ ಎಂದು ರಾಹುಲ್ ಗಾಂಧಿ ಹೇಳಿದ್ದರು.. ಹಿಂದಿಯ ಪನೌತಿ ಎಂಬ ಪದಕ್ಕೆ ಕನ್ನಡದಲ್ಲಿ ಅಪಶಕುನ ಎನ್ನಲಾಗುತ್ತದೆ.