alex Certify BREAKING : ಪ್ರಧಾನಿ ಮೋದಿಗೆ ‘ಅಪಶಕುನ ‘ ಎಂದ ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪ್ರಧಾನಿ ಮೋದಿಗೆ ‘ಅಪಶಕುನ ‘ ಎಂದ ರಾಹುಲ್ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್

ಪ್ರಧಾನಿ ಮೋದಿಗೆ ‘ಅಪಶಕುನ ‘ ಎಂದ ರಾಹುಲ್ ಗಾಂಧಿಗೆ ಕೇಂದ್ರ ಚುನಾವಣಾ ಆಯೋಗ ನೋಟಿಸ್ ನೀಡಿದೆ.

ಕಳೆದ ಭಾನುವಾರ ನವೆಂಬರ್ 19 ರಂದು ಗುಜರಾತ್ನ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಏಕದಿನ ಕ್ರಿಕೆಟ್ ವಿಶ್ವ ಕಪ್ ಪಂದ್ಯಾವಳಿಯ ಫೈನಲ್ ಪಂದ್ಯ ನಡೆದಿತ್ತು. ಈ ಪಂದ್ಯದ ವೀಕ್ಷಣೆಗೆ ಪ್ರಧಾನಿ ಮೋದಿ ತೆರಳಿದ್ದರು. ಫೈನಲ್ನಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ ಭಾರತ ಸೋತು ವಿಶ್ವಕಪ್ ಟ್ರೋಫಿಯಿಂದ ವಂಚಿತವಾಗಿತ್ತು.

ಈ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಂದ್ಯ ವೀಕ್ಷಿಸಲು ಪ್ರಧಾನಿ ಮೋದಿ ಹೋಗಿದ್ದರಿಂದಲೇ ಭಾರತ ಸೋಲು ಕಂಡಿತು ಎಂದು ವ್ಯಂಗ್ಯವಾಡಿದ್ದರು. ಪಿಎಂ ಎಂದರೆ ‘ಪನೌತಿ ಮೋದಿ’ ಎಂದು ರಾಹುಲ್ ಗಾಂಧಿ ಹೇಳಿದ್ದರು.. ಹಿಂದಿಯ ಪನೌತಿ ಎಂಬ ಪದಕ್ಕೆ ಕನ್ನಡದಲ್ಲಿ ಅಪಶಕುನ ಎನ್ನಲಾಗುತ್ತದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...