ಬೆಂಗಳೂರು : ಸೀಟ್ ಬ್ಲಾಕಿಂಗ್ ನಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ 3 ಪ್ರತಿಷ್ಟಿತ ಕಾಲೇಜುಗಳಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
ವಿಚಾರಣೆಗೆ ಹಾಜರಾಗುವಂತೆ ನ್ಯೂ ಹಾರಿಜನ್ ಕಾಲೇಜ್ ಆಫ್ ಇಂಜಿನಿಯರಿಂಗ್, ಬಿಎಂಎಸ್ ಇಂಜಿನಿಯರಿಂಗ್ ಕಾಲೇಜು, ಆಕಾಶ್ ಇಂಜಿನಿಯರಿಂಗ್ ಕಾಲೇಜಿಗೆ ಮಲ್ಲೇಶ್ವರಂ ಪೊಲೀಸರು ನೋಟಿಸ್ ನೀಡಿದ್ದು, ವಿದ್ಯಾರ್ಥಿಗಳ ದಾಖಲಾತಿ ಸಮೇತ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದಾರೆ.
‘KEA’ ಸೀಟುಗಳ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ 10 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.ಕೆಇಎ ಆಡಳಿತಾಧಿಕಾರಿ ಸಾಲುದ್ದೀನ್ ಜೆ ಗಾಡಿಯಲ್ ನೀಡಿದ ದೂರಿನ ಮೇರೆಗೆ ಕೆಇಎ ನೌಕರ ಅವಿನಾಶ್ ಸೇರಿ 10 ಮಂದಿ ಆರೋಪಿಗಳನ್ನು ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿದ್ದರು.
ಕೆಇಎ ನೌಕರ ಅವಿನಾಶ್ ಸಹಾಯದಿಂದ ಲಕ್ಷಾಂತರ ರೂ ಹಣಕ್ಕೆ ಸೀಟುಗಳನ್ನು ಅಕ್ರಮವಾಗಿ ಡೀಲ್ ಮಾಡುತ್ತಿದ್ದರು.
ಅಭ್ಯರ್ಥಿಗಳು ಕಾಲೇಜು ಪ್ರವೇಶ ಪಡೆಯದ್ದರಿಂದ ಮುಂದಿನ ಅರ್ಹ ಅಭ್ಯರ್ಥಿಗಳಿಗೆ ಉದ್ದೇಶಪೂರ್ವಕವಾಗಿ ವಂಚಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಹಾಗೂ ಸರ್ಕಾರಿ ಸೀಟುಗಳ ಬದಲಿಗೆ ಮ್ಯಾನೇಜ್ ಮೆಂಟ್ ಕೋಟಾದ ಸೀಟುಗಳಾಗಿ ಪತಿವರ್ತಿಸಿ ಸರ್ಕಾರಿ ಖಾಸಗಿ ಕಾಲೇಜು ಅಭ್ಯರ್ಥಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದವು ಎಂಬ ಆರೋಪ ಕೇಳಿಬಂದಿತ್ತು.