ಬೆಂಗಳೂರು : ಬೆಂಗಳೂರಿನಲ್ಲಿ ಏಕಾಏಕಿ ಕುಸಿದ ನರ್ಸರಿ ಶಾಲೆ ಕಟ್ಟಡವೊಂದು ಕುಸಿದು ಬಿದ್ದಿದ್ದು, ಅದೃಷ್ಟವಶಾತ್ ಭಾರಿ ದುರಂತವೊಂದು ತಪ್ಪಿದೆ.
ಬೆಂಗಳೂರಿನ ಶಿವಾಜಿನಗರದ ಕುಕ್ಸ್ ರೋಡ್ ನ ಬಿ ಕ್ರಾಸ್ ನಲ್ಲಿರುವ ನರ್ಸರಿ ಶಾಲೆಯ ಕಟ್ಟಡ ನೆಲಕ್ಕುರುಳಿದೆ. ಶಿಥಿಲಗೊಂಡಿದ್ದ ಕಟ್ಟಡ ಇಂದು ಮುಂಜಾನೆ 3 ಗಂಟೆ ವೇಳೆಗೆ ಕುಸಿದು ಬಿದ್ದಿದೆ. ಮುಂಜಾನೆ ಈ ಅವಘಡ ನಡೆದಿದ್ದರಿಂದ ಅದೃಷ್ಟವಶಾತ್ ಯಾವುದೇ ಮಕ್ಕಳಿಗೂ ತೊಂದರೆ ಆಗಿಲ್ಲ. ಪೋಷಕರು ಮಕ್ಕಳನ್ನು ಶಾಲೆಗೆ ಬಿಡಲು ಬಂದಾಗ ಕುಸಿದು ಬಿದ್ದ ಕಟ್ಟಡ ನೋಡಿ ಪೋಷಕರು ಶಾಕ್ ಆಗಿದ್ದಾರೆ.
ಶಾಲೆಯಲ್ಲಿ 80 ಕ್ಕೂ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಅದೃಷ್ಟವಶಾರ್ ಭಾರಿ ದೊಡ್ಡ ದುರಂತವೊಂದು ತಪ್ಪಿದೆ. ಶಾಲೆ ಕಟ್ಟಡ ಕುಸಿದ ಪರಿಣಾಮ ಕಟ್ಟಡದ ಅವಶೇಷಗಳಡಿ ಸಿಲುಕಿ ವಾಹನಗಳು ಜಖಂ ಆಗಿದೆ.