ಬೆಂಗಳೂರು : ಅಪಾರ್ಟ್ ಮೆಂಟ್ ನಿಂದ ಜಿಗಿದು ವೃದ್ದೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಚಿಕ್ಕಬಿದರಕಲ್ಲು ಜಿಂದಾಲ್ ಪ್ರೆಸ್ಟೀಜ್ ಅಪಾರ್ಟ್ ಮೆಂಟ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಯಲಕ್ಷ್ಮಮ್ಮ ಎಂಬ ವೃದ್ದೆ (68) ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇದರಿಂದ ಮನನೊಂದ ವೃದ್ದೆ ಅಪಾರ್ಟ್ ಮೆಂಟ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸೊಸೆ, ಪುತ್ರ ಕೆಲಸಕ್ಕೆ ಹೋದ ಮೇಲೆ ವೃದ್ದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.