ಬೆಂಗಳೂರು : ಬೆಂಗಳೂರಿನ ಹೋಟೆಲ್ ವೊಂದರಲ್ಲಿ ಸಿಲಿಂಡರ್ ಸ್ಪೋಟಗೊಂಡು ಹೋಟೆಲ್ ಮುಂದೆ ಮಲಗಿದ್ದ ವೃದ್ಧರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಡೈರಿ ಸರ್ಕಲ್ ಬಳಿ ಇರುವ ಮಹಾಲಿಂಗೇಶ್ ಬಡಾವಣೆಯಲ್ಲಿರುವ ಪೋಲಮಸ್ ಹೋಟೆಲ್ ನಲ್ಲಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಹೋಟೆಲ್ ಮುಂದೆ ಮಲಗಿದ್ದ ವೃದ್ಧ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹೋಟೆಲ್ ಒಳಗೆ ಇದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಆಡುಗೋಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ,