ತುಮಕೂರು : ತುಮಕೂರು ಜಿಲ್ಲೆಯಲ್ಲಿ ಓರ್ವ ವ್ಯಕ್ತಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ತುಮಕೂರು ಜಿಲ್ಲೆಯ ಮಧುಗಿರಿ ಮೂಲದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ಧೃಡವಾಗಿದ್ದು, ಸೋಂಕಿತನನ್ನು ಐಸೋಲೇಷನ್ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯದಲ್ಲಿ ಕೊರೊನಾ ಸೋಂಕು ಭೀತಿ ಮತ್ತೆ ಮೂಡಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿದೆ. ರಾಮನಗರ ಜಿಲ್ಲೆಯಲ್ಲಿ ಇಬ್ಬರಿಗೆ ಕೊರೊನಾ ಸೋಂಕು ಧೃಡವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆರೋಗ್ಯ ಇಲಾಖೆ ಹಲವು ಕ್ರಮ ಕೈಗೊಂಡಿದೆ.