alex Certify BREAKING : ಚಿಕ್ಕಮಗಳೂರಿನಲ್ಲಿ ಖಾಸಗಿ ಬಸ್ ಅಪಘಾತ : ಓರ್ವ ವಿದ್ಯಾರ್ಥಿನಿ ಸಾವು, ನಾಲ್ವರು ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚಿಕ್ಕಮಗಳೂರಿನಲ್ಲಿ ಖಾಸಗಿ ಬಸ್ ಅಪಘಾತ : ಓರ್ವ ವಿದ್ಯಾರ್ಥಿನಿ ಸಾವು, ನಾಲ್ವರು ಗಂಭೀರ

ಚಿಕ್ಕಮಗಳೂರು : ಶಾಲೆಗೆ ತೆರಳಲು ಬಸ್ ಗಾಗಿ ಕಾಯುತ್ತ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ದುಗ್ಲಾಪುರದಲ್ಲಿ ನಡೆದಿದೆ.

ದುಗ್ಲಾಪುರ ಗ್ರಾಮದಲ್ಲಿ ಇಂದು ಬೆಳಗ್ಗೆ ಶಾಲೆಗೆ ತೆರಳಲು ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಚಾಲಕನ ನಿಯಂತ್ರಣ ಕಳೆದಕೊಂಡ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ನಾಲ್ವರ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಮೃತ ವಿದ್ಯಾರ್ಥಿನಿಯನ್ನು 8 ನೇ ತರಗತಿ ವಿದ್ಯಾರ್ಥಿನಿ ತುಳಸಿ ಎಂದು ಗುರುತಿಸಲಾಗಿದೆ.

ಶಾಲೆಗೆ ತೆರಳಲು ಬಸ್ ಗೆ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಬಸ್ ಡಿಕ್ಕಿ ಹೊಡೆದಿದೆ. ಚಿಕಿತ್ಸೆ ಫಲಕಾರಿಯಾಗದೇ ತುಳಸಿ ಶಿವಮೊಗ್ಗ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿರುವ ನಾಲ್ವರು ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಆಕ್ರೋಶಗೊಂಡ ಸ್ಥಳೀಯರು ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...