ಬೆಂಗಳೂರು : ಬೆಂಗಳೂರಲ್ಲಿ ‘ಆಪರೇಷನ್ ಚೀತಾ’ ಯಶಸ್ವಿಯಾಗಿದ್ದು, ಕೊನೆಗೂ ಬೊಮ್ಮನಹಳ್ಳಿ ಚಿರತೆ ಸೆರೆ ಸಿಕ್ಕಿದೆ.
ಹೌದು, ಕಳೆದ ಎರಡು-ಮೂರು ದಿನಗಳಿಂದ ಸಿಲಿಕಾನ್ ಸಿಟಿ ಜನರಲ್ಲಿ ಆತಂಕ ಮೂಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸತತ ಕಾರ್ಯಾಚರಣೆ ನಂತರ ಸೆರೆಹಿಡಿದಿದ್ದಾರೆ.
ಸೆರೆ ಹಿಡಿಯುವ ವೇಳೆ ವೈದ್ಯರ ಮೇಲೆಯೇ ದಾಳಿ ನಡೆಸಲು ಮುಂದಾಗಿದ್ದು, ಟಾಸ್ಕ್ ಪೋರ್ಸ್ವಾಹನಕ್ಕೆ ಶಿಫ್ಟ್ ಮಾಡಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಬೆಂಗಳೂರಿನ ಬೊಮ್ಮನಹಳ್ಳಿ ಪ್ರದೇಶದ ಅಪಾರ್ಟ್ಮೆಂಟ್ ಒಂದರಲ್ಲಿ ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಅರಣ್ಯ ಇಲಾಖೆಯ ಸಿಬ್ಬಂದಿ ಕಿರಣ್ ಎಂಬುವರ ತಲೆ ಹಾಗೂ ಕುತ್ತಿಗೆಯ ಭಾಗಕ್ಕೆ ಪರಚಿದೆ.
ಕೂಡ್ಲು ಸಮೀಪದ ಕೃಷ್ಣಾರೆಡ್ಡಿ ಬಡಾವಣೆಯಲ್ಲಿ ಕಳೆದ ಭಾನುವಾರ ರಾತ್ರಿ ಚಿರತೆ ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಸಾರ್ವಜನಿಕರು ರಸ್ತೆಯಲ್ಲಿ ಓಡಾಡದಂತೆ ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿತ್ತು. ಸದ್ಯ. ಬೆಂಗಳೂರಲ್ಲಿ ‘ಆಪರೇಷನ್ ಚೀತಾ’ ಯಶಸ್ವಿಯಾಗಿದ್ದು, ಕೊನೆಗೂ ಚಿರತೆ ಸೆರೆ ಸಿಕ್ಕಿದೆ.
ಸಾಂದರ್ಭಿಕ ಚಿತ್ರ