ಕೊಪ್ಪಳ : ಕೊಪ್ಪಳದಲ್ಲಿ ಖಾಸಗಿ ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇಮಗುಡ್ಡ ಬಳಿ ಖಾಸಗಿ ಬಸ್ ಪಲ್ಟಿಯಾಗಿದ್ದು, 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಹೈದರಾಬಾದ್ ನಿಂದ ಬೆಳಗಾವಿಗೆ ತೆರಳುತ್ತಿದ್ದ ಖಾಸಗಿ ಬಸ್ ಬೊಲೆರೊ ವಾಹನಕ್ಕೆ ಡಿಕ್ಕಿ ತಪ್ಪಿಸಲು ಹೋಗಿ ಪಲ್ಟಿಯಾಗಿದೆ. ಗಾಯಾಳುಗಳನ್ನು ಗಂಗಾವತಿ ಹಾಗೂ ಕೊಪ್ಪಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.