alex Certify BREAKING : ರಸ್ತೆಗೆ ಅಂಬೇಡ್ಕರ್ ಹೆಸರಿಡಲು ವಿರೋಧ : ನಂಜನಗೂಡಿನಲ್ಲಿ ಕಲ್ಲು ತೂರಾಟ, 30ಕ್ಕೂ ಹೆಚ್ಚು ಮಂದಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಸ್ತೆಗೆ ಅಂಬೇಡ್ಕರ್ ಹೆಸರಿಡಲು ವಿರೋಧ : ನಂಜನಗೂಡಿನಲ್ಲಿ ಕಲ್ಲು ತೂರಾಟ, 30ಕ್ಕೂ ಹೆಚ್ಚು ಮಂದಿಗೆ ಗಾಯ

ನಂಜನಗೂಡು: ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದ ರಸ್ತೆಯೊಂದಕ್ಕೆ ಅಂಬೇಡ್ಕರ್‌ ಹೆಸರಿನ ನಾಮಫಲಕ ಅಳವಡಿಕೆ ಸಂಬಂಧ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದು ಪರಸ್ಪರ ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಹಲ್ಲರೆ ಗ್ರಾಮದಲ್ಲಿ ರಾತ್ರಿ ಕಲ್ಲುತೂರಾಟದಲ್ಲಿ ಪಿಎಸ್‌ಐ ಸೇರಿದಂತೆ ಮೂವರು ಪೊಲೀಸರು ಹಾಗೂ 30ಕ್ಕೂ ಹೆಚ್ಚು ಮಂದಿ ಗ್ರಾಮಸ್ಥರು ಗಾಯಗೊಂಡಿದ್ದು, 30ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿರುವ ಘಟನೆ ತಾಲೂಕಿನ ಹಲ್ಲರೆ ಗ್ರಾಮದಲ್ಲಿನಡೆದಿದೆ.

ಹಲ್ಲರೆ ಗ್ರಾಮದಿಂದ ಹುರ ಗ್ರಾಮದ ಕಡೆಗೆ ತೆರಳುವ ರಸ್ತೆಗೆ ಡಾ.ಬಿ.ಆರ್.‌ ಅಂಬೇಡ್ಕರ್‌ ಹೆಸರಿಡಲು ಪರಿಶಿಷ್ಟ ಸಮುದಾಯದ ಯುವಕರು ಸ್ಥಳೀಯ ಗ್ರಾಮಪಂಚಾಯಿಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆದಿದ್ದರು. ಆದರೆ ಇಲ್ಲಿ ಫಲಕ ಅಳವಡಿಸಬೇಡಿ ಎಂದು ನಾಯಕ ಸಮುದಾಯದವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

ಆದರೆ ನಿನ್ನೆ ಸಂಜೆ ಪರಿಶಿಷ್ಟ ಜಾತಿಯ ಯುವಕರು ರಸ್ತೆಯಲ್ಲಿ ನಾಮಫಲಕ ಅಳವಡಿಸುವಾಗ ಆರಂಭಗೊಂಡ ಜಗಳವು ವಿಕೋಪಕ್ಕೆ ತಿರುಗಿದ್ದು, ಪರಸ್ಪರ ಕಲ್ಲು ತೂರಾಟ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ.

ಮಾಹಿತಿ ಪಡೆದು ಸ್ಥಳಕ್ಕಾಗಮಿಸಿದ್ದ ಪೊಲೀಸರ ಮೇಲೂ ಉದ್ರಿಕ್ತರ ಗುಂಪು ಕಲ್ಲುತೂರಾಟ ನಡೆಸಲಾಗಿದೆ. ಘಟನೆಯಲ್ಲಿ ನಂಜನಗೂಡು ಗ್ರಾಮಾಂತರ ಠಾಣೆ ಪಿಎಸ್‌ಐ ಗೋಪಾಲಕೃಷ್ಣ ಸೇರಿದಂತೆ ಮೂವರು ಪೊಲೀಸರಿಗೆ ಗಾಯಗಳಾಗಿದ್ದು, ಗಾಯಗೊಂಡ ಎಲ್ಲರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...