ನವದೆಹಲಿ : ಮೆಕ್ಕಾದಲ್ಲಿ ಮಿತಿ ಮೀರಿದ ತಾಪಮಾನದ ಹಿನ್ನೆಲೆ ಕನಿಷ್ಠ 550 ಹಜ್ ಯಾತ್ರಿಕರು ಸಾವನ್ನಪ್ಪಿದ್ದಾರೆ ಎಂದು ರಾಜತಾಂತ್ರಿಕರು ಮಂಗಳವಾರ ಹೇಳಿದ್ದಾರೆ.
ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಹಜ್ ಯಾತ್ರೆಗೆ ತೆರಳಿದ್ದರು.ಮೃತಪಟ್ಟವರಲ್ಲಿ ಕನಿಷ್ಠ 323 ಮಂದಿ ಈಜಿಪ್ಟಿನವರು, ಅವರಲ್ಲಿ ಹೆಚ್ಚಿನವರು ಶಾಖ ಸಂಬಂಧಿತ ಕಾಯಿಲೆಗಳಿಗೆ ಬಲಿಯಾಗಿದ್ದಾರೆ.
ಮೃತ ದೇಹಗಳನ್ನು ಮೆಕ್ಕಾದ ಅಲ್-ಮುಯಿಸೆಮ್ ನೆರೆಹೊರೆಯಲ್ಲಿರುವ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಎಂದು ತಮ್ಮ ದೇಶಗಳ ಪ್ರತಿಕ್ರಿಯೆಗಳನ್ನು ಸಂಯೋಜಿಸುವ ಇಬ್ಬರು ಅರಬ್ ರಾಜತಾಂತ್ರಿಕರು ತಿಳಿಸಿದ್ದಾರೆ. ಈ ವರ್ಷ ಸುಮಾರು 18 ಲಕ್ಷ ಯಾತ್ರಾರ್ಥಿಗಳು ಹಜ್ ಯಾತ್ರೆಯಲ್ಲಿ ಭಾಗವಹಿಸಿದ್ದರು, ಅವರಲ್ಲಿ 16 ಲಕ್ಷ ಯಾತ್ರಿಕರು ವಿವಿಧ ದೇಶಗಳಿಂದ ಬಂದಿದ್ದರು ಎಂದು ರಾಜತಾಂತ್ರಿಕರು ತಿಳಿಸಿದ್ದಾರೆ.