ಬೆಳಗಾವಿ : 2 ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದವರು ಹೋರಾಟ ನಡೆಸುತ್ತಿದ್ದು, ಸುವರ್ಣಸೌಧದದ ಬಳಿ ಬಂದೋಬಸ್ತ್ ಮಾಡಲಾಗಿದೆ.
ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟ ತೀವ್ರಗೊಂಡಿದ್ದು, ಸುವರ್ಣಸೌಧಕ್ಕೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಗಾಯಗಳಾಗಿದೆ.
ಇಂದು 2 ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದವರು ಹೋರಾಟ ನಡೆಸುತ್ತಿದ್ದು, ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ಹಿನ್ನೆಲೆ ಕಾನೂನು ಸುವ್ಗವಸ್ಥೆ ಎಡಿಜಿಪಿ ಹಿತೇಂದ್ರ ಮತ್ತು ಪೊಲೀಸ್ ಸಿಬ್ಬಂದಿಗಳು ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ನಡೆಸಿದ್ದಾರೆ.
ಪೊಲೀಸರ ಮೇಲೆ ಕಲ್ಲು ತೂರಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಬೀಸಿದ್ದಾರೆ. ಪೊಲೀಸರ ಲಾಠಿ ಏಟಿಗೂ ಜಗ್ಗದೇ ಸುವರ್ಣಸೌಧಕ್ಕೆ ನುಗ್ಗಲು ಯತ್ನಿಸಿದ್ದು, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. 2 ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯ ಪ್ರತಿಭಟನೆ ನಡೆಸುತ್ತಿದೆ.