ನವದೆಹಲಿ : ಫೆ.1 ರಂದು ಸಂಸತ್ ನಲ್ಲಿ ಬಜೆಟ್ ಮಂಡನೆ ನಡೆಯಲಿದ್ದು, ಈ ಹಿನ್ನೆಲೆ ಕೇಂದ್ರ ಸರ್ಕಾರ ನಾಳೆ ( ಜ.30) ಸರ್ವಪಕ್ಷಗಳ ಸಭೆ ಕರೆದಿದೆ. ನಾಳೆ ಬೆಳಗ್ಗೆ 11:30 ಕ್ಕೆ ಸರ್ವಪಕ್ಷಗಳ ಜೊತೆ ಕೇಂದ್ರ ಸರ್ಕಾರ ಸಭೆ ನಡೆಸಲಿದೆ.
ಲೋಕಸಭೆ ಚುನಾವಣೆಯ ಹೊತ್ತಲ್ಲೇ ಕೇಂದ್ರ ಸರ್ಕಾರ 2024ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಲಿದೆ. ಜನವರಿ 31 ರಿಂದ ಫೆಬ್ರವರಿ 9 ರವರೆಗೆ ಸಂಸತ್ ಬಜೆಟ್ ಅಧಿವೇಶನ ನಡೆಯಲಿದ್ದು, ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ.
17ನೇ ಲೋಕಸಭೆಯ ಕೊನೆಯ ಅಧಿವೇಶನವು ಜನವರಿ 31 ರಿಂದ ಫೆಬ್ರವರಿ 9ರವರೆಗೆ ನಡೆಯಲಿದೆ. ಜಂಟಿ ಅಧಿವೇಶನಗಳನ್ನು ಉದ್ದೇಶಿಸಿ ಗೌರವಾನ್ವಿತ ರಾಷ್ಟ್ರಪತಿಗಳ ಭಾಷಣದೊಂದಿಗೆ ಕಲಾಪಗಳು ಆರಂಭವಾಗಲಿದೆ.