ನವದೆಹಲಿ : ಇಂದಿನಿಂದ ಸಂಸತ್ ಅಧಿವೇಶನ ಆರಂಭವಾಗಲಿದ್ದು, ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ಭಾಷಣ ಮಾಡುತ್ತಿದ್ದಾರೆ.
ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ, ಸುಗಮ ಕಲಾಪಕ್ಕೆ ವಿಪಕ್ಷಗಳ ನಾಯಕರು ಸಹಕಾರ ನೀಡಬೇಕು ಎಂದು ಸಂಸತ್ ಭವನದ ಬಳಿ ಪ್ರಧಾನಿ ಮೋದಿ ಹೇಳಿದರು. ನಾಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ, ಲೋಕಸಭೆ ಚುನಾವಣೆ ಬಳಿಕ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದ್ದಾರೆ ಎಂದರು.
ಎಂದರು. ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ.
ಲೋಕಸಭೆಯ ಕೊನೆಯ ಬಜೆಟ್ ಅಧಿವೇಶನ ಜನವರಿ ಇಂದಿನಿಂದ ಆರಂಭವಾಗಲಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರ ನಾಳೆ ಬೆಳಿಗ್ಗೆ 11 ಗಂಟೆಗೆ ಮಧ್ಯಂತರ ಬಜೆಟ್ 2024 ಅನ್ನು ಮಂಡಿಸಲಿದ್ದಾರೆ. 2024-2025ರ ಮಧ್ಯಂತರ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು ಮಂಡಿಸಲಿದ್ದು, ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಗುವ ನಿರೀಕ್ಷೆಯಿದೆ.